ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಅಧಿಕ ತೂಕದ ಕಾರಣ ಫೈನಲ್ ಪಂದ್ಯಕ್ಕೂ ಮುನ್ನ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ. ಇದೀಗ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ವಿನೇಶ್ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್ ಎಂದು ಹುರಿದುಂಬಿಸಿದ್ದಾರೆ.
ಇದರ ಜೊತೆಗೆ ಭಾರತ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷರಾಗಿರುವ ಪಿಟಿ ಉಷಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿರುವ ಮೋದಿ, ವಿನೇಶ್‌ರ ಅನರ್ಹತೆಯನ್ನು ಪ್ರತಿಭಟಿಸುವಂತೆ ಸೂಚನೆ ನೀಡಿರುವುದಲ್ಲದೆ, ಭಾರತದ ಮುಂದಿರುವ ಆಯ್ಕೆಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.