ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ.
ಇದೀಗ ವಿನೇಶ್ ಫೋಗಟ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಪ್ರಸ್ತುತ ಪ್ಯಾರಿಸ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಿರ್ಜಲೀಕರಣದಿಂದಾಗಿ ವಿನೇಶ್ ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ.