ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ನೋ ಪಾರ್ಕಿಂಗ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆ.8ರಿಂದ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಈ ವೇಳೆ ಉದ್ಯಾನಕ್ಕೆ ಗಣ್ಯವ್ಯಕ್ತಿಗಳು, ಪ್ರವಾಸಿಗರು, ಸಾರ್ವಜನಿಕರು ಸೇರಿ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಸಂಚಾರ ಪೊಲೀಸ್‌ ವಿಭಾಗದಿಂದ ಸುಗಮ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು
ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
ಮಾಡಬಹುದಾಗಿದೆ.
ಡಾ. ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ಜೆ.ಸಿ. ರಸ್ತೆ- ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು
ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ,
ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ.
ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ.
ಆರ್‌ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲ‌ರ್‌ವರೆಗೆ
ಅಶೋಕ ಪಿಲ್ಲರ್‌ನಿಂದ ಸಿದ್ದಾಮರ ಜಂಕ್ಷನ್ ವರೆಗೆ.

ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಹಾಗೂ ವಾಹನಗಳ ನಿಲುಗಡೆಗೆ ಮಾಡಲಾಗಿರುವ ವ್ಯವಸ್ಥೆಯನ್ನು ಅನುಸರಿಸಲು ಕೋರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!