January15, 2026
Thursday, January 15, 2026
spot_img

ಪ್ರಯಾಗರಾಜ್​ನಲ್ಲಿ ಮಾಘ ಮೇಳದ ಸಂಭ್ರಮ: ಸಂಗಮದಲ್ಲಿ ಮಿಂದೆದ್ದ 21 ಲಕ್ಷಕ್ಕೂ ಹೆಚ್ಚು ಭಕ್ತರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಗರಾಜ್‌ನಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದಲ್ಲಿ ಗುರುವಾರ ಗಂಗಾ ನದಿ ಹಾಗೂ ಸಂಗಮದಲ್ಲಿ 21 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.

ಮಧ್ಯರಾತ್ರಿಯಿಂದಲೇ ಭಕ್ತರ ಸ್ನಾನ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆ ಹೊತ್ತಿಗೆ ಸುಮಾರು 21 ಲಕ್ಷ ಮಂದಿ ಪವಿತ್ರ ಸ್ನಾನ ನೆರವೇರಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಕಾಲವು ದಿನವಿಡೀ ಮುಂದುವರಿಯುವ ಕಾರಣ, ಸಂಜೆಯ ವೇಳೆಗೆ ಯಾತ್ರಾರ್ಥಿಗಳ ಸಂಖ್ಯೆ ಒಂದು ಕೋಟಿಯನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಿದರು.

ವಿಭಾಗೀಯ ಆಯುಕ್ತರಾದ ಸೌಮ್ಯಾ ಅಗರ್ವಾಲ್ ಅವರು, ಏಳು ವಲಯಗಳಲ್ಲಿ 800 ಹೆಕ್ಟೇರ್ ಪ್ರದೇಶದಲ್ಲಿ ಮಾಘ ಮೇಳ ಮಾಡಲಾಗುತ್ತಿದೆ. ಮೇಳದ ಆವರಣದಲ್ಲಿ 25,000ಕ್ಕೂ ಹೆಚ್ಚು ಶೌಚಾಲಯಗಳನ್ನು ಸ್ಥಾಪಿಸಲಾಗಿದ್ದು, 3,500ಕ್ಕೂ ಹೆಚ್ಚು ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಭಕ್ತರು ಅಲ್ಪಾವಧಿಯ ‘ಕಲ್ಪವಾಸ’ (ಆಧ್ಯಾತ್ಮಿಕ ಶುದ್ಧೀಕರಣಕ್ಕೆ ಮೀಸಲಾದ ಅವಧಿ) ಪಾಲಿಸಲು ಅನುಕೂಲವಾಗುವಂತೆ ಮಾಘ ಮೇಳದಲ್ಲಿ ವಿಶೇಷ ಟೆಂಟ್ ಸಿಟಿಯನ್ನು ನಿರ್ಮಿಸಲಾಗಿದೆ. ಇಲ್ಲಿ ಧ್ಯಾನ ಮತ್ತು ಯೋಗ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ. ಜೊತೆಗೆ ಭಕ್ತರ ಸಂಚಾರ ಸುಗಮಗೊಳಿಸಲು ಬೈಕ್ ಟ್ಯಾಕ್ಸಿ ಮತ್ತು ಗಾಲ್ಫ್ ಕಾರ್ಟ್ ಸೇವೆಗಳನ್ನೂ ವ್ಯವಸ್ಥೆ ಮಾಡಲಾಗಿದೆ ಎಂದು ಸೌಮ್ಯಾ ಅಗರ್ವಾಲ್ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಘ ಮೇಳದ ಪೊಲೀಸ್ ಅಧೀಕ್ಷಕ ನೀರಜ್ ಪಾಂಡೆ, ಯಾತ್ರಾರ್ಥಿಗಳ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ 10,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಮೇಳ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇಷ್ಟೇ ಅಲ್ಲದೆ, 2025–26ನೇ ಸಾಲಿನ ಮಾಘ ಮೇಳಕ್ಕಾಗಿ ಅನೇಕ ಘಾಟ್‌ಗಳನ್ನು ನಿರ್ಮಿಸಲಾಗಿದ್ದು, ಭಕ್ತರಿಗೆ ಬಟ್ಟೆ ಬದಲಾಯಿಸುವ ಕೊಠಡಿಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ನೀರಜ್ ಪಾಂಡೆ ತಿಳಿಸಿದ್ದಾರೆ.

Must Read

error: Content is protected !!