ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕೋಡಿ ಬಳಿಯ ಬೆಳಕೂಡ ಗೇಟ್‌ನಲ್ಲಿ ಬುಲೋರೋ ಪಿಕ್‌ಅಪ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಲ್ಲಿ ಓರ್ವ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಮೂವರು ಮುಧೋಳ ಮೂಲದವರು ಪ್ರಯಾಣಿಸುತ್ತಿದ್ದಾಗ ಈ ಅಪಘಾತದ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಆ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.