ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಗಿನೆಲೆ ಮಹಾಸಂಸ್ಥಾನದ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿದ್ದಾರೆ.
ಶ್ರೀಗಳ ಅಗಲಿಕೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, “ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಕೇವಲ ಧಾರ್ಮಿಕ ಮುಖಂಡರಷ್ಟೇ ಆಗಿರಲಿಲ್ಲ, ಬದಲಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಸದಾ ಹಂಬಲಿಸುತ್ತಿದ್ದ ಅಪರೂಪದ ಶ್ರದ್ಧಾಜೀವಿಗಳಾಗಿದ್ದರು. ಅವರ ನಿಧನದಿಂದ ನಾಡಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ಲೋಕಕ್ಕೆ ದೊಡ್ಡ ನಷ್ಟ ಉಂಟಾಗಿದೆ,” ಎಂದು ಸ್ಮರಿಸಿದ್ದಾರೆ.
ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಅಪಾರ ಭಕ್ತವೃಂದ ಮತ್ತು ಅನುಯಾಯಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.


