ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಫೋಗಟ್‌ ತನಗೆ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಸಲ್ಲಿದ್ದ ಮನವಿಯ ವಿಚಾರಣೆಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS​) ಶುಕ್ರವಾರವೇ ಮುಕ್ತಾಯಗೊಳಿಸಿದೆ. ಇದೀಗ ಅಂತಿಮ ತೀರ್ಪು ಇಂದು ರಾತ್ರಿ 9.30ಕ್ಕೆ ಪ್ರಕಟಗೊಳ್ಳಲಿದೆ.

ತಮ್ಮ ಪರ ಸಕಾರತ್ಮಕ ತೀರ್ಪು ವಿಶ್ವಾಸವನ್ನು ಭಾರತೀಯ ಒಲಿಂಪಿಕ್ಸ್​ ಸಂಸ್ಥೆ(ಐಒಎ) ವ್ಯಕ್ತಪಡಿಸಿದೆ. ಹರೀಶ್ ಸಾಳ್ವೆ ಅವರು ಸತತ ಒಂದು ಗಂಟೆಗಳ ಕಾಲ ವಾದ ಮಂಡಿಸಿದ್ದರು.

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಅವರು ಶುಕ್ರವಾರ ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಚಿನ್ನದ ಪದಕದ ಪಂದ್ಯಕ್ಕೆ ಮುಂಚಿತವಾಗಿ ಅನರ್ಹಗೊಂಡ ಭಾರತೀಯ ಕುಸ್ತಿಪಟುವಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂಬುದಾಗಿ ನುಡಿದಿದ್ದಾರೆ. ಪ್ಯಾರಿಸ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಥಾಮಸ್, ಸಿಎಎಸ್ ನಿರ್ಧಾರಕ್ಕೆ ಐಒಸಿ ಬದ್ಧವಾಗಿರುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!