ಹೊಸದಿಗಂತ ಡಿಜಿಟಲ್ ಡೆಸ್ಕ್;
ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಲು ಮುಂದಾಗಿದ್ದು, ಬಾಲಕಿ ಕೂಗಿ ಬೊಬ್ಬೆ ಹಾಕಿದ್ದಾರೆ.
ಉಡುಪಿಯ ಹೂಡೆ ಪರಿಸರದಲ್ಲಿ ಈ ಭಯಾನಕ ಘಟನೆ ನಡೆದಿದೆ.
ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ನಾಲ್ಕೈದು ನಾಯಿಗಳು ಒಮ್ಮೆಲೇ ದಾಳಿ ಮಾಡಿದ್ದು, ವಿದ್ಯಾರ್ಥಿನಿ ಬೊಬ್ಬೆ ಹಾಕಿದ್ದಾಳೆ.
ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳನ್ನು ಓಡಿಸಿ ಪ್ರಾಣಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿನಿಯ ಮೇಲೆ ನಡೆದ ನಾಯಿ ದಾಳಿಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.