ಹೊಸದಿಗಂತ ವರದಿ, ಅಂಕೋಲಾ
ಲಾರಿಯೊಂದರಲ್ಲಿ ಇಂಜಿನ್ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಘಟನೆ ವಂದಿಗೆ ಬೋಳೆ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ್ದು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಕೆಲಸ ಮಾಡಿದ್ದಾರೆ.
ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಕೆ.ಎ25 ಡಿ 7763 ನೋಂದಣಿ ಸಂಖ್ಯೆ ಹೊಂದಿರುವ ಲಾರಿಯ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಲಾರಿ ಚಾಲಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.
ತಕ್ಷಣ ಕಾರ್ಯಪೃವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದು ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಡೆದಿದ್ದಾರೆ.