ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಂಡ್ಯದಲ್ಲಿ ಬೆಳ್ಳಂಬೆಳ್ಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಡಕ್ಕ ಅಲಿಯಾಸ್ ಮುತ್ತುರಾಜ್ ನನ್ನು ಹಲಗೂರು ಠಾಣೆ ಸಿಪಿವೈ ಶ್ರೀಧರ್ ಗುಂಡಿಟ್ಟು ಫೈರಿಂಗ್ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಆಯುಕ್ತ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಜುಲೈ 30 ರಂದು ಕಾಂತರಾಜು ಎಂಬುವರನ್ನು ಕೊಲೆ ಮಾಡಲಾಗಿತ್ತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿವೈ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ಚಿಕ್ಕಮಲಗೂಡು ಬಳಿ ಡಕ್ಕ ಇರುವ ಎಂಬ ಮಾಹಿತಿ ಇದೆ. ಡಕ್ಕ ಬೈಕ್ ನಲ್ಲಿ ಹೋಗುತ್ತಿರುವಾಗ ಆರೋಪಿಯನ್ನ ಹಿಡಿಯಲು ಸಿಪಿಐ ಶ್ರೀಧರ್ ಅಂಡ್ ಟೀಂ ಸಿದ್ಧತೆ ನಡೆಸಿತ್ತು. ಈ ವೇಳೆ ಬೈಕ್ ಅನ್ನು ನಿಲ್ಲಿಸಿ ಓಡಿ ಹೋಗಲು ಯತ್ನಿಸಿದ್ದು, ಆತನನ್ನು ಹಿಡಿಯಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆ ಆರೋಪಿ ದಾಳಿ ನಡೆಸಿದ್ದಾನೆ. ಆರೋಪಿ ಡಕ್ಕ ಏರ್ ಫೈರ್ ವಾರ್ನಿಂಗ್ ಗೆ ಬಗ್ಗಲಿಲ್ಲ ಕೊನೆಗೆ ತಮ್ಮ ಆತ್ಮರಕ್ಷಣೆಗಾಗಿ ಸಿಪಿವೈ ಶ್ರೀಧರ್ ಫೈರಿಂಗ್ ಮಾಡಿದ್ದಾರೆ.
ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು, ಗಾಯಾಳು ರೌಡಿಶೀಟರ್ ಅನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.