ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೈದು ಮಂದಿ ಅಸ್ವಸ್ಥ

ಹೊಸದಿಗಂತ ವರದಿ, ಬೇಲೂರು :

ಭತ್ತ ಸಸಿ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಹದಿನೈದು ಮಂದಿ ಅಸ್ವಸ್ಥರಾಗಿದ್ದು, ಒಬ್ಬ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ, ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿತದಿಂದ ಅಸ್ಪಸ್ಥರಾಗಿ ಸಕಲೇಶಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋರ್ಲಗದ್ದೆ ಗ್ರಾಮದ ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಭತ್ತದ ಗದ್ದೆಯಲ್ಲಿ 25ಕ್ಕೂ ಹೆಚ್ಚು ಮಂದಿ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಸಂಜೆ ವೇಳೆ ಏಕಾಏಕಿ ಗುಡುಗು ಸಹಿತ ಸಿಡಿಲು ಬಡಿದಿದ್ದರಿಂದ 15 ಮಂದಿ ಅಸ್ಪಸ್ಥಗೊಂಡಿದ್ದಾರೆ. ಇವರಲ್ಲಿ ಲತಾ ಎಂಬುದ ಸ್ಥಿತಿ ಗಂಭೀರಾಗಿದೆ. ತಕ್ಷಣ ಎಲ್ಲರನ್ನು ಸಕಲೇಶಪುರ ತಾಲ್ಲೂಕಿನ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಗೆ ದಾಖಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!