ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.
ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ ಅಜಯ್ ಶಾ (50) ಅವರನ್ನು ರಾತ್ರಿ 10 ಗಂಟೆ ಸುಮಾರಿಗೆ ಪಾಟ್ನಾದ ಅಲಮ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ನಂತರ ಎಎಸ್ಪಿ ಶರತ್ ಆರ್.ಎಸ್. ಸ್ಥಳಕ್ಕೆ ಆಗಮಿಸಿ, ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.