ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು.
ನಮಗೆ ನ್ಯಾಯ ಬೇಕು ಎಂದು ಭಿತ್ತಿಪತ್ರಗಳನ್ನು ಹಿಡಿದು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ನಗರದ ಬೀದಿ ಬೀದಿಗಳಲ್ಲಿ ಸಂಚರಿಸಿದರು. ಇಂದು ನಾನು ಕಚೇರಿಯಲ್ಲಿ 11 ಗಂಟೆ ಕೆಲಸ ಮಾಡಿ ಬಂದರೂ ಈ ರಾತ್ರಿ ಇಲ್ಲಿ ಸೇರಿದ್ದೇನೆ. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ನಿಗೂಢವಾಗಿ ಹತ್ಯೆ ಮಾಡಿರುವ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾ ನಿರತ ಮಹಿಳೆ ಹೇಳುತ್ತಾರೆ.