ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೈವಾನ್ ಮೂಲದ ಆಪಲ್ ಫೋನ್ ತಯಾರಕ, ಫಾಕ್ಸ್‌ಕಾನ್ ಸಂಸ್ಥೆಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು.

ಖಾಸಗಿ ಹೋಟೆಲ್‌ನಲ್ಲಿ ನಡೆದ ಔತಣಕೂಟದಲ್ಲಿ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಅಗತ್ಯವಿರುವ ಎಲ್ಲಾ ಸಹಕಾರ ಮತ್ತು ಬೆಂಬಲವನ್ನು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಉನ್ನತ ಸಾಂಸ್ಕೃತಿಕ ಮೌಲ್ಯಗಳನ್ನು ಗೌರವಿಸುವ ದೇಶಗಳಲ್ಲಿ ಉದ್ಯಮಕ್ಕೆ ಅಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಭೋಜನ ಕೂಟದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!