ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಜೆ.ಜೆ.ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸಾಲ್ ಮೊಹಮ್ಮದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ಸಾಲ್ ಮೊಹಮ್ಮದ್ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ಸಾವಿನ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.