ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ,ಬೆಳಗಾವಿ:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ. ನಾವೂ ಕೂಡ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದರು.

ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ತಾಗಲಿದೆ ಎಂದು ಹೆಬ್ಬಾಳ್ಕರ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!