ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಹಲವು ಚಿತ್ರಗಳಲ್ಲಿ ಹಾಡಿರುವ ಖ್ಯಾತ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ವರ್ಷದ ಸುಶೀಲಾ ಅವರನ್ನು ಆಗಸ್ಟ್ 17 ರಂದು ಹೊಟ್ಟೆ ನೋವಿನಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಪ್ರಕಾರ ಸದ್ಯ ಅವರ ಆರೋಗ್ಯ ಚೆನ್ನಾಗಿದೆ ಎಂದು ಮೂಲಗಳು ತಿಳಿಸಿವೆ.
ಆ.17 ರಂದು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆಯಿಂದ ಪಿ.ಸುಶೀಲಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಲಾಗಿದೆ.