ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವತ್ರಿಕ ಚುನಾವಣೆಯ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಹೆಚ್ಚಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಜುಲ್ಫಿಕರ್ ಅಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮುವಿನ ತ್ರಿಕೂಟ ನಗರದಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪಕ್ಷ ಸೇರಿದ್ದಾರೆ.
ಜುಲ್ಫಿಕರ್ ಅಲಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಪ್ನಿ ಪಕ್ಷದ ಉಪನಾಯಕರಾಗಿದ್ದಾರೆ. ಅವರು ವೃತ್ತಿಯಲ್ಲಿ ವಕೀಲರು. ಈ ಹಿಂದೆ ರಾಜ್ಯದಲ್ಲಿ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮಾಧ್ಯಮ ವರದಿಗಳ ಪ್ರಕಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಅಲಿ, 2008 ಮತ್ತು 2014ರ ವಿಧಾನಸಭಾ ಚುನಾವಣೆಯಲ್ಲಿ ರಾಜೌರಿ ಜಿಲ್ಲೆಯ ದರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಭ್ಯರ್ಥಿಯಾಗಿ ಆಯ್ಕೆಯಾದರು. ಅವರು 2015 ರಿಂದ 2018 ರವರೆಗೆ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.