ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ.
ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ.
ಮಚಾಡೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾಡೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ.
ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾಡೊ ನಿರಾಕರಿಸಿದರು. ವೆನೆಜುವೆಲಾದ ಸ್ವಾತಂತ್ರ್ಯಕ್ಕೆ ಅವರ ವಿಶೇಷ ಕೊಡುಗೆಗಾಗಿ ಪುರಸ್ಕಾರವನ್ನು ಅವರಿಗೆ ಅರ್ಪಿಸಿದ್ದೇನೆ ಎಂದಷ್ಟೇ ಹೇಳಿದ್ದಾರೆ.
ಮಚಾಡೊ ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಶ್ವೇತಭವನದಲ್ಲಿ ಬಿಟ್ಟು ಹೋಗಿದ್ದಾರೆ. ಮೂಲಗಳು ಹೇಳುವಂತೆ ಪದಕವು ಪ್ರಸ್ತುತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಳಿ ಇದೆ ಮತ್ತು ಟ್ರಂಪ್ ಅದನ್ನು ಇಟ್ಟುಕೊಂಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದೇ ನೊಬೆಲ್ ಪ್ರಶಸ್ತಿಯು ಒಮ್ಮೆ ಮಚಾದೊ ಮತ್ತು ಟ್ರಂಪ್ ನಡುವಿನ ಸಂಬಂಧದಲ್ಲಿ ಪ್ರಮುಖ ಉದ್ವಿಗ್ನತೆಗೆ ಕಾರಣವಾಗಿತ್ತು.


