ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಊಟ ಕೋರಿ ದರ್ಶನ್ ಸಲ್ಲಿಸಲಾಗಿರುವ ಮನವಿಯ ಅರ್ಜಿಯನ್ನು ಹೈಕೋರ್ಟ್ ಸೆ.5ಕ್ಕೆ ಮುಂದೂಡಿದೆ.
ಇಂದು ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಾಲಯಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು.
ಮನೆಯೂಟಕ್ಕೆ ಅವಕಾಶ ನೀಡುವಂತೆ ದರ್ಶನ್ ಮಾಡಿದ್ದ ಮನವಿಯನ್ನು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ತಿರಸ್ಕರಿಸಿದ್ದಾರೆ. ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಅವಕಾಶ ಕೋರಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ನಾವದಗಿ ಮನವಿ ಪುರಸ್ಕರಿಸಿದ ಕೋರ್ಟ್ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.