ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂಥ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಮಹಾರಾಷ್ಟ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬದ್ಲಾಪುರ್ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.
ಘಟನೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ , ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದು ನಿಜಕ್ಕೂ ಬೇಸರ ತರಿಸಿದೆ. ಪುಣೆ ಮತ್ತು ಮುಂಬೈನ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಶಾಲೆಯಲ್ಲಿ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ದೂರು ಕೂಡ ನೀಡಲಾಗಿದೆ. ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳು ನಮ್ಮ ಆದ್ಯತೆಯಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.