ಹೊಸದಿಗಂತ ವರದಿ, ಪುತ್ತೂರು:
ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.20 ರಂದು ಪುತ್ತೂರು ತಾಲೂಕಿನ ಗ್ರಾಮಾಂತರದ ಕೆಯ್ಯೂರಿನಲ್ಲಿ ನಡೆದಿದೆ.
ಕೆಯ್ಯೂರು ಗ್ರಾಮದ ಉದ್ಯೋಳೆ ನಿವಾಸಿ ಸಚಿನ್(27) ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ಬಜರಂಗದಳ ಕೆಯ್ಯೂರು ಘಟಕ ಸುರಕ್ಷಾ ಪ್ರಮುಖ್ ಆಗಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಬಿಸಿಎ ಪದವಿ ವಿದ್ಯಾಭ್ಯಾಸ ಮಾಡಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರದ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.