ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್ ಸ್ಫೋಟ: 15 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಅಚ್ಚುತಪುರಂ ವಿಶೇಷ ಆರ್ಥಿಕ ವಲಯ (SEZ) ನಲ್ಲಿರುವ ಕಂಪನಿಯೊಂದರಲ್ಲಿ ರಿಯಾಕ್ಟರ್ ಸ್ಫೋಟದಲ್ಲಿ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ಅನಕಪಲ್ಲಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೀಪಿಕಾ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಗಳ ಸ್ಥಿತಿ ಇನ್ನೂ ಬಹಿರಂಗಗೊಂಡಿಲ್ಲ. ಸ್ಫೋಟದ ಕಾರಣವನ್ನು ಅಧಿಕಾರಿಗಳು ಪ್ರಸ್ತುತ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!