ಲಡಾಖ್‌ ನಲ್ಲಿ ಕಂದಕಕ್ಕೆ ಉರುಳಿದ ಬಸ್‌: 6 ಮಂದಿ ಸಾವು,22 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮುವಿನ ಲಡಾಖ್‌ನ ಲೇಹ್ ಜಿಲ್ಲೆಯಲ್ಲಿ ಶಾಲಾ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ .

ಕಾರ್ಯಕ್ರಮವೊಂದಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್‌ ದುರ್ಬುಕ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ ಎಂದು ಜಿಲ್ಲಾಧಿಕಾರಿ ಸಂತೋಷ್ ಸುಖದೇವ್ ತಿಳಿಸಿದ್ದಾರೆ.

ಪೊಲೀಸ್ ಮತ್ತು ಜಿಲ್ಲಾಡಳಿತದವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಗಾಯಗೊಂಡ 22 ಜನರನ್ನು ಲೇಹ್‌ನಲ್ಲಿರುವ ಎಸ್‌ಎನ್‌ಎಂ ಆಸ್ಪತ್ರೆ ಮತ್ತು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಸುಖದೇವ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!