January16, 2026
Friday, January 16, 2026
spot_img

ಬೆಂಗಳೂರು ಉಪನಗರ ರೈಲ್ವೆ ಯೋಜನೆ ವೇಗ ಹೆಚ್ಚಿಸಲು ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಮೋದಿ ಕರೆ ಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲಿಸಿದರು. ಇವು ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಈ ಯೋಜನೆಗಳಲ್ಲಿ ತ್ವರಿತ ಪ್ರಗತಿ ಸಾಧಿಸುವಂತೆ ಮೋದಿ ತಿಳಿಸಿದ್ದಾರೆ.

2025ರ ಡಿಸೆಂಬರ್ 31 ರಂದು ನಡೆದ ಸಭೆಯಲ್ಲಿ ಪ್ರಧಾನ ಮಂತ್ರಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್ ದೇವದುಲ ಲಿಫ್ಟ್ ನೀರಾವರಿ ಯೋಜನೆಯನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಯು ನಾಲ್ಕು ದಶಕಗಳಿಂದ ಚರ್ಚೆಯಲ್ಲಿದೆ. ಅಂತಿಮವಾಗಿ ಇದನ್ನು 2020 ರಲ್ಲಿ ಮಂಜೂರು ಮಾಡಲಾಯಿತು. 2023 ರಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇನ್ನೂ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ.

Must Read

error: Content is protected !!