ಮಹಿಳಾ ಟಿ20 ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಇಂಡಿಯಾ-ಪಾಕ್‌ ಮ್ಯಾಚ್‌ಗೆ ರೆಡಿಯಾಗಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ. ಪಂದ್ಯಾವಳಿ ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. ದುಬೈ ಮತ್ತು ಶಾರ್ಜಾದಲ್ಲಿ ಒಟ್ಟಾರೆ 23 ಪಂದ್ಯಗಳು ನಡೆಯಲಿದ್ದು, ಒಟ್ಟಾರೆ 19ದಿನ ಪಂದ್ಯಾವಳಿಗಳು ನಡೆಯಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ಮಹಿಳಾ ತಂಡ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್​ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

Image

ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!