ತಮಿಳು ನಟ ಬಿಜಿಲಿ ರಮೇಶ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಲಿವುಡ್ ನಟ ಬಿಜಿಲಿ ರಮೇಶ್  ಇಂದು ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.‌

ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದ ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಆರ್ಥಿಕವಾಗಿಯೂ ನಟ ಸಂಕಷ್ಟದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!