ದೆಹಲಿ ಅಬಕಾರಿ ನೀತಿ ಪ್ರಕರಣ : ಕಡೆಗೂ ಕವಿತಾಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ  ಕೆ. ಕವಿತಾಗೆ ಸುಪ್ರೀಂಕೋರ್ಟ್  ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ ಕೆ.ಕವಿತಾ ಮಾರ್ಚ್ 15ರಿಂದ ಬಂಧನದಲ್ಲಿದ್ದರು. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು, ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೆ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷ್ಯ ಇದೆ ಎಂಬುದನ್ನು ತೋರಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!