ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿಯೂ ಮಂಕಿಪಾಕ್ಸ್ ಭಯ ಹೆಚ್ಚಾಗುತ್ತಿದೆ. ಮುಖ್ಯವಾಗಿ ಕರ್ನಾಟಕ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು, ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸುವಂತೆ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ. ಶಂಕಿತ ಮಂಕಿಪಾಕ್ಸ್ ಚಿಕಿತ್ಸೆ ನೀಡಲು ಬೆಂಗಳೂರಿನ ಇಂದಿರಾನಗರ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ.
ಮಂಕಿಪಾಕ್ಸ್ ಕಂಡುಬಂದಲ್ಲಿ 21 ದಿನಗಳ ಕಾಲ ಕ್ಯಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದೆ. ವಿಮಾನ ನಿಲ್ದಾಣಗಳು, ಬಂದರು ಹಾಗೂ ರಾಜ್ಯದ ಎಲ್ಲಾ ಕಡೆಗಳಲ್ಲಿ ನಿಗಾವಹಿಸುವಂತೆ ವ್ಯವಸ್ಥಾಪಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಂಕಿತರನ್ನು ಗುರುತಿಸಿ ಸ್ಟ್ರೀನಿಂಗ್ ಮಾಡುವಂತೆ ಹಾಗೂ ಅಂತರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ನಡೆಸುವಂತೆ ಆರೋಗ್ಯ ಇಲಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.