January16, 2026
Friday, January 16, 2026
spot_img

ಬೆಂಗಳೂರು ಚಿನ್ನಸ್ವಾಮಿ ಮೈದಾನಕ್ಕೆ ಎಐ ಕ್ಯಾಮೆರಾ ಅಳವಡಿಸಲು ಆರ್‌ಸಿಬಿ ಸಜ್ಜು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೆಸಿಯು 2026(IPL 2026) ರ ಐಪಿಎಲ್ ಋತುವಿಗೆ ಮುಂಚಿತವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆಯನ್ನು ಬಲಪಡಿಸಲು ಮತ್ತು ಅಭಿಮಾನಿಗಳ ಸುರಕ್ಷತೆಯನ್ನು ಸುಧಾರಿಸಲು 300 ರಿಂದ 350 AI-ಸಕ್ರಿಯಗೊಳಿಸಿದ ಕ್ಯಾಮೆರಾಗಳನ್ನು ಅಳವಡಿಸಲು ಔಪಚಾರಿಕವಾಗಿ ಪ್ರಸ್ತಾಪಿಸಿದೆ.

ಈ ಬಾರಿಯ ಐಪಿಎಲ್‌ ಪಂದ್ಯ ಬೆಂಗಳೂರಿಂದ ಹೊರಗಡೆ ಹೋಗುತ್ತಾ ಎಂಬ ಪ್ರಶ್ನೆಯ ಮಧ್ಯೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಚಿನ್ನಸ್ವಾಮಿ ಮೈದಾನಕ್ಕೆ ಕೃತಕ ಬುದ್ಧಿಮತ್ತೆ(AI) ಕ್ಯಾಮೆರಾ ಅಳವಡಿಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮುಂದಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಆಯೋಜನೆ ಮಾಡುವ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಮ್ಯಾನ್ಮೆಜ್‌ಮೆಂಟ್‌ ಜೊತೆ ಹಲವು ಸುತ್ತಿನ ಮಾತುಕತೆ ನಡೆಸುತ್ತಿದೆ. ಮಾತುಕತೆ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಜನಸಂದಣಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಅದರಂತೆ ಈಗ ಕ್ರಿಕೆಟ್‌ ಮೈದಾನದ ಸುತ್ತಲು ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಸುಮಾರು 300 ರಿಂದ 350 ಎಐ ಕ್ಯಾಮೆರಾ ಅಳವಡಿಸುವ ಪ್ರಸ್ತಾಪವನ್ನು ಕೆಎಸ್‌ಸಿಎಗೆ ಸಲ್ಲಿಸಿದೆ.

ಆರ್‌ಸಿಬಿಯಿಂದ ಈ ಮಹತ್ವದ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಈ ಬಾರಿಯೂ ಬೆಂಗಳೂರಿನಲ್ಲೇ ಪಂದ್ಯ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಆರ್‌ಸಿಬಿ ಹೇಳಿದ್ದೇನು?
ಆಟೊಮೇಷನ್ ಮೂಲಕ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ತಂತ್ರಜ್ಞಾನ ಕಂಪನಿಯಾದ ಸ್ಟಾಕ್ ಜೊತೆ ನಾವು ಪಾಲುದಾರಿಕೆ ಹೊಂದಿದ್ದೇವೆ. ಅತ್ಯಾಧುನಿಕ ಮುಖ ಗುರುತಿಸುವಿಕೆ ತಂತ್ರಜ್ಞಾನ ಇರುವ ಕಾರಣ ಈ ಕಂಪನಿಯ ಕ್ಯಾಮೆರಾಗಳನ್ನು ಅನೇಕ ರಾಜ್ಯದ ಪೊಲೀಸ್ ಪಡೆಗಳು ಬಳಕೆ ಮಾಡುತ್ತಿವೆ. ತನಿಖೆಗಳಲ್ಲೂ ಸಹಾಯ ಮಾಡಿದೆ. ಗಲಾಟೆ, ಅನಧಿಕೃತ ಪ್ರವೇಶ ಮತ್ತು ಒಳನುಗ್ಗುವಿಕೆಯಂತಹ ಘಟನೆಗಳು ನಡೆದರೆ ಆರಂಭದಲ್ಲೇ ಪತ್ತೆ ಹಚ್ಚುತ್ತದೆ. ಎಲ್ಲಾ ಅಭಿಮಾನಿಗಳಿಗೆ ಸುರಕ್ಷತೆಗೆ ಒತ್ತು ನೀಡಲು ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

Must Read

error: Content is protected !!