ಹೊಸದಿಗಂತ ಡಿಜಿಟಲ್ ಡೆಸ್ಕ್;
ಟಿಟಿ ವಾಹನ ಕಾರು ನಡುವೆ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 12 ಮಂದಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಇಂದು(ಬುಧವಾರ) ನಡೆದಿದೆ.
ಟಿಟಿ ವಾಹನ ಆಂಧ್ರ ಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಈ ವೇಳೆ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಟಿಟಿ ವಾಹನದಲ್ಲಿದ್ದ 12 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಇನ್ನು ಈ ಘಟನೆ ಕುರಿತು ಕೆಂಚಾರ್ಲ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.