ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.
ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ ತೆರಳಬೇಕಿತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.
ಬಳಿಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಕರ್ನಾಟಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.


