ಹೊಸ ದಿಗಂತ ವರದಿ,ಹುಬ್ಬಳ್ಳಿ:
ಇತ್ತೀಚೆಗೆ ದೆಹಲಿಯಲ್ಲಿ ನಡೆದ ೬ ನೇ ಡಿಜಿಟಲ್ ಟ್ರಾನ್ಸ್ಪರ್ಮೆಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನವೀನ ಡಿಜಿಟಲ್ ಆರೋಗ್ಯ ಸೇವೆ ಹಾಗೂ ಸಾರ್ವಜನಿಕ ಆರೋಗ್ಯ ದತ್ತಾಂಶ ವಿಶ್ಲೇಷಣಾತ್ಮಕ ವಿಭಾಗದಡಿ ಸಾರಿಗೆ ಸಂಜೀವಿನಿ ತಂತ್ರಾಂಶದ ಅಭಿವೃದ್ಧಿ ಹಾಗೂ ಅನುಷ್ಠಾನಗೊಳಿಸಿದ ಹಿನ್ನೆಲೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಈ ಕುರಿತು ಸಂಸ್ಥೆ ಪ್ರಕಟಣೆಗೆ ತಿಳಿಸಿದ್ದು,ಸಂಸ್ಥೆಯ ಉಪಮುಖ್ಯ ಗಣಕ ವ್ಯವಸ್ಥಾಪಕ ಶ್ರೀನಾಥ ಜಿ. ಹಾಗೂ ಸಾರ್ವಜನಿಕ ಸಂಪರ್ಕಾಽಕಾರಿ ನವೀನಕುಮಾರ ತಿಪ್ಪಾ ಅವರು ಸಂಸ್ಥೆಯ ಪರವಾಗಿ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯ ಅತಿಥಿ ಭಾಗವಹಿಸಿದ್ದ ವ್ಯವಸ್ಥಾಪಕ ನಿರ್ದೇಶಕ ಕೈಲಾಸ ಅಧಿಕಾರಿ ಪ್ರಶಸ್ತಿ ಪಡೆದಿದ್ದಾರೆ.
ತಂತ್ರಾಂಶ ಅಭಿವೃದ್ಧಿ ಮತ್ತು ಅನುಷ್ಠಾನಕ್ಕಾಗಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ತೋರಿ ಪ್ರಶಸ್ತಿ ಪಡೆದ ಹಿನ್ನೆಲೆ ಸಂಸ್ಥೆಯ ಅಧ್ಯಕ್ಷ ಭರಮಗೌಡ ಕಾಗೆ, ಉಪಾಧ್ಯಕ್ಷ ಸುನೀಲ್ ಹಣಮನ್ನವರ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕಾ ಎಂ ಅವರು ಹರ್ಷ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ.


