ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಶೋಕನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್‍ಗೆ ಚಾಕು ಇರಿದ ಘಟನೆ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮೊಹಮ್ಮದ್ ಶಫಿ ಎಂದು ಗುರುತಿಸಲಾಗಿದೆ. ಕೊರಿಯರ್ ಮಾಡಲು ಕಳಿಸಿದ ಲೊಕೇಷನ್‍ಗೆ ಬರದೇ, ಲ್ಯಾಂಡ್ ಮಾರ್ಕ್ ಕೇಳಿದ್ದಕ್ಕೆ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ. ದುಷ್ಕರ್ಮಿ ಚಾಕು ಇರಿಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಡುಬೀದಿಯಲ್ಲಿ ಯುವಕನನ್ನು ಅಟ್ಟಾಡಿಸಿ , ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಅಶೋಕನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.