ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ತೃಣಮೂಲ ಕಾಂಗ್ರೆಸ್‌ನ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲೆ ಇಡಿ ಇತ್ತೀಚೆಗೆ ದಾಳಿ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮತ್ತು ಭಾನುವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ರಾಜಕೀಯ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜನವರಿ 17 ರಂದು ಅಲ್ಪಸಂಖ್ಯಾತರ ಪ್ರಾಬಲ್ಯದ ಮಾಲ್ಡಾದಲ್ಲಿ ಮತ್ತು ಜನವರಿ 18 ರಂದು ಹೂಗ್ಲಿ ಜಿಲ್ಲೆಯಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.
;ಪ್ರಧಾನಿ ಮೋದಿ ಅವರು ಶನಿವಾರ ಮಧ್ಯಾಹ್ನ ಮಾಲ್ಡಾಗೆ ಆಗಮಿಸಲಿದ್ದಾರೆ. ಅವರು ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಹತ್ತಿರದ ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ, ಅವರು ಮತ್ತೆ ಬಂಗಾಳಕ್ಕೆ ಬರಲಿದ್ದಾರೆ, ಈ ಬಾರಿ ಹೂಗ್ಲಿಯ ಸಿಂಗೂರ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಸಾರ್ವಜನಿಕ ರ್ಯಾಲಿಯನ್ನು ನಡೆಸಲಿದ್ದಾರೆ’ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.


