ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸೋಮವಾರ ಬಾಂಬ್ ಸ್ಪೋಟ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ಸಚಿವಾಲಯ ಮತ್ತು ಪೊಲೀಸರು ತಿಳಿಸಿದ್ದಾರೆ.
ದಾರುಲ್ ಅಮನ್ನ ನೈಋತ್ಯ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಝದ್ರನ್ ತಿಳಿಸಿದ್ದಾರೆ.