ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನ ಚೆಟ್ಪೇಟೆಯಲ್ಲಿರುವ ಬಯೋ ಸಿಎನ್ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ‘ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ.
ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ‘ಚೆನ್ನೈ ಮಾದರಿ’ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು. ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ ಸಿಕ್ಕ ಕಾರಣಕ್ಕೆ ಭೇಟಿ ನೀಡಿದ್ದೇನೆ. ನಮ್ಮ ರಾಜ್ಯದಲ್ಲೂ ಒಂದಷ್ಟು ಇಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು’ ಎಂದರು.
ಅನೇಕ ಕಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ. ನಮ್ಮಲ್ಲಿಯೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ಹೈದರಾಬಾದ್ಗೆ ಭೇಟಿ ನೀಡಿದ್ದೆ. ಇಲ್ಲಿ ನಗರದ ನಡುವೆಯೇ ಸಿಎನ್ ಜಿ ಉತ್ಪಾದನಾ ಘಟಕವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ನಮ್ಮಲ್ಲೂ ಒಂದಷ್ಟು ಒಳ್ಳೆ ಕೆಲಸ ಮಾಡಿದ್ದೇವೆ. ಇಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಿದ್ದಾರೆ ಎಂದರು.