ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯ ನಿರ್ವಹಣೆ ವೇಳೆ ಕಾಡು ಪ್ರಾಣಿಗಳಿಗೆ ಅರಣ್ಯ ಸಿಬ್ಬಂದಿ ಬಲಿಯಾದರೇ ರಾಜ್ಯ ಸರ್ಕಾರದಿಂದ 15 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು.
ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು.
ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.
ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.
ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.