Paralympics 2024: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ 2 ಪದಕ, ಬೆಳ್ಳಿ ಗೆದ್ದು ಸಂಭ್ರಮಿಸಿದ ಅಜೀತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ಯಾರಿಸ್‌ನ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ F46 ಈವೆಂಟ್‌ನಲ್ಲಿ ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಮಂಗಳವಾರ ಸ್ಟೇಡ್ ಡಿ ಫ್ರಾನ್ಸ್‌ ಸ್ಟೇಡಿಯಂ ನಲ್ಲಿ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪೈಪೋಟಿ ಕಂಡು ಬಂದಿತ್ತು. ಅದರಲ್ಲೂ ಮೂವರು ಭಾರತೀಯರು ಟಾಪ್-5 ಹಣಾಹಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಆದರೆ ಕ್ಯೂಬಾದ ಗಿಲ್ಲೆರ್ಮೊ ವರೋನಾ ಗೊನ್ಝಲ್ವೆಝ್ ಅವರು ವೈಯಕ್ತಿಕವಾಗಿ 66.14 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಈ ವರ್ಷದ ಆರಂಭದಲ್ಲಿ ಜಪಾನ್‌ನ ಕೋಬ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿರುವ ಗೊನ್ಝಲ್ವೆಝ್ ಹಾಲಿ ವಿಶ್ವ ಚಾಂಪಿಯನ್ ಆಗಿ ಪ್ಯಾರಾಲಿಂಪಿಕ್ಸ್ ಗೆ ಆಗಮಿಸಿದ್ದರು. ವಿಶೇಷ ಎಂದರೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಗೊನ್ಝಲ್ವೆಝ್ ಈ ಬಾರಿ ಬಂಗಾರದ ಪದಕಕ್ಕೆ ಕೊರೊಳೊಡ್ಡಿದರು.

ಇನ್ನು 31 ಮೂಲದ ಅಜೀತ್ ಅವರು 65.62 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕವನ್ನು ಪಡೆದರು‌. ಇದು ಅವರ ವೈಯಕ್ತಿಕ ಅತ್ಯುತ್ತಮ ಸಾಧನೆಯಾಗಿದೆ. 2021 ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಜೀತ್ 8 ನೇ ಸ್ಥಾನ ಪಡೆದಿದ್ದರು. ಈ ಬಾರಿ ಅತ್ಯುತ್ತಮ ಪ್ರದರ್ಶನದೊಂದಿಗೆ ದ್ವಿತೀಯ ಸ್ಥಾನ ಪಡೆದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!