ಹರಿಯಾಣ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ರಾಜ್ಯದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಪಕ್ಷದ ಹಿರಿಯ ನಾಯಕ ಅನಿಲ್ ವಿಜ್ ಅಂಬಾಲಾ ಕ್ಯಾಂಟ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಅವರು ಗೆದ್ದಿರುವ ಕರ್ನಾಲ್ ಅಸೆಂಬ್ಲಿ ಸ್ಥಾನವನ್ನು ಪ್ರಸ್ತುತ ಅವರು ಪ್ರತಿನಿಧಿಸುತ್ತಿರುವ ಕಾರಣ ಮುಖ್ಯಮಂತ್ರಿ ಸೈನಿ ಅವರ ಕ್ಷೇತ್ರವನ್ನು ಬಿಜೆಪಿ ಬದಲಾಯಿಸಿದೆ.

https://x.com/BJP4India/status/1831346433665994800?ref_src=twsrc%5Etfw%7Ctwcamp%5Etweetembed%7Ctwterm%5E1831346433665994800%7Ctwgr%5E2895645a564981325331bf011a87d4c206a2529f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fnews%3Fmode%3Dpwaaction%3Dclick

ಹರಿಯಾಣ ಮಾಜಿ ಗೃಹ ಸಚಿವ ವಿಜ್ ಅವರು ತಮ್ಮ ಸ್ಥಾನದಿಂದ ಟಿಕೆಟ್ ಉಳಿಸಿಕೊಂಡರು. ಅಂಬಾಲಾ ಕಂಟೋನ್ಮೆಂಟ್ ನಿಂದ ಅವರು 2009 ರಿಂದ ಸತತ ಮೂರು ಬಾರಿ ಗೆಲುವು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!