ಸಿಎಂ ರಾಜೀನಾಮೆ ಕೊಡಬೇಕಾದ ಆತಂಕದಿಂದ ಕೋವಿಡ್ ಅಸ್ತ್ರ ಪ್ರಯೋಗ: ಬಿ.ವೈ.ವಿಜಯೇಂದ್ರ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ರಾಜೀನಾಮೆ ಕೊಡಬೇಕಾದ ಪರಿಸ್ಥಿತಿಗೆ ಮುಖ್ಯಮಂತ್ರಿಗಳು ಬಂದು ನಿಂತಿದ್ದು, ಇದಕ್ಕಾಗಿ ಕೋವಿಡ್ ಅಸ್ತ್ರ ಪ್ರಯೋಗಿಸಿದ್ದಾರೆ. ಆದ್ರೆ ಕಾಂಗ್ರೆಸ್ ಸರ್ಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ. ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ ಎಂದಿದ್ದಾರೆ.

ಕಳೆದ ಹಲವಾರು ದಶಕಗಳಿಂದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಭಾಗಕ್ಕೆ ನೀರು ಕೊಡುವ ಯೋಜನೆ ಇದಾಗಿದೆ. ಇದರ ಆರಂಭದಲ್ಲಿ ಸುಮಾರು 8,500 ಕೋಟಿ ರೂ. ಯೋಜನಾ ವೆಚ್ಚ ಇದ್ದುದು ಈಗ ಅದು 20-22,500 ಕೋಟಿಗೆ ರೂ.ಗೆ ಏರಿದೆ. ಈ ಯೋಜನೆಗೆ ಚಾಲನೆ ನೀಡಿದ್ದು ಸಂತೋಷ. ಆದರೆ, ಅದರ ಮೂಲ ಉದ್ದೇಶ ಈಡೇರಲಿದೆಯೇ ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!