ಆನೆ ದಾಳಿ ಭೀತಿಯಿಂದ ಒಟ್ಟಿಗೇ ಮಲಗಿದ್ದ ಮೂವರು ಮಕ್ಕಳನ್ನು ಕಚ್ಚಿ ಕೊಂದ ಹಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆನೆ ದಾಳಿ ಭಯದಿಂದ ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಜಾರ್ಖಂಡ್‌ ನಡೆದಿದೆ.

ಜಾರ್ಖಂಡ್‌ನ ಗರ್ವಾ ಜಿಲ್ಲೆಯ ಚಪ್ಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ‘ಆನೆ ದಾಳಿಗೆ ಹೆದರಿ ಒಂದೇ ಕುಟುಂಬದ ಸುಮಾರು 8 ರಿಂದ 10 ಮಕ್ಕಳು ತಮ್ಮ ಹೆಂಚಿನ ಮನೆಯ ನೆಲದ ಮೇಲೆ ಮಲಗಿದ್ದರು. ಈ ವೇಳೆ ಮಧ್ಯರಾತ್ರಿ ಪಕ್ಕದ ಹೊಲದಿಂದ ವಿಷಕಾರಿ ಹಾವೊಂದು ಆಹಾರ ಅರಸುತ್ತ ಮನೆಯೊಳಗೆ ಬಂದಿದ್ದು, ಈ ವೇಳೆ ಮೂವರು ಮಕ್ಕಳನ್ನು ಕಚ್ಚಿದೆ.

ಹಾವಿನ ಕಡಿತದ ಬಳಿಕ ಮಕ್ಕಳು ಅಳಲು ಆರಂಭಿಸಿದ್ದು ಈ ವೇಳೆ ಮಕ್ಕಳು ಹಾವಿನ ಕಡಿತ ಮನಗಂಡು ಕೂಡಲೇ ಹಳ್ಳಿಯಲ್ಲಿದ್ದ ಮಾಂತ್ರಿಕನ ಬಳಿಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ವೇಳೆ ಹಾವಿನ ಕಡಿತಕ್ಕೊಳಗಾಗಿದ್ದ ಹೆಣ್ಣು ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಆಕೆ ಕೂಡ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಮಕ್ಕಳನ್ನು ಪನ್ನಾಲಾಲ್ ಕೊರ್ವಾ (15), ಕಾಂಚನ್ ಕುಮಾರಿ (8), ಮತ್ತು ಬೇಬಿ ಕುಮಾರಿ (9) ಎಂದು ಗುರುತಿಸಲಾಗಿದೆ ಎಂದು ಚಿನಿಯಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ನೀರಜ್ ಕುಮಾರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!