ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ರಿಲೀಸ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF ಜೋಡಿ ಬೇರ್ಪಡುವುದು ಬಹುತೇಕ ಖಚಿತವಾದಂತಾಗಿದೆ. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬೀಳುವ ಸುದ್ದಿ ಹೊರಬಿದ್ದಿದೆ.
ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಈಗಾಗಲೇ 40 ವರ್ಷ ದಾಟಿರುವ ಅವರು ಮುಂಬರುವ ಸೀಸನ್ಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಆರ್ಸಿಬಿ ಬದಲಿ ನಾಯಕನನ್ನು ರೂಪಿಸಿಕೊಳ್ಳಬೇಕಿದೆ. ಹೀಗಾಗಿಯೇ ಫಾಫ್ ಡುಪ್ಲೆಸಿಸ್ ಅವರನ್ನು ಕೈ ಬಿಡಲು ಆರ್ಸಿಬಿ ನಿರ್ಧರಿಸಿದೆ.