WEATHER | ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆದರೆ, ಉತ್ತರದ ಬೆಳಗಾವಿ, ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಗುಡ್ಡಗಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲೂ ಸಾಧಾರಣ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!