ಹೊಸದಿಗಂತ ನಾಗಮಂಗಲ :
ರಾಜ್ಯದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ದೌರ್ಜನ್ಯ ನಡೆಸಿ ಅಂಗಡಿಗಳಿಗೆ ಬೆಂಕಿ ಹಚ್ಚಿ ಬೈಕ್‌ಗಳನ್ನು ಸುಟ್ಟು ಹಾಕುವುದು ಮುಂದುವರಿದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸರ್ವನಾಶವಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದರು.
ಗಣೇಶ ಮೆರವಣಿಗೆ ಸಮಯದಲ್ಲಿ ಎರಡು ಕೋಮಿನ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣಕ್ಕೆ ಗುರುವಾರ ಸಂಜೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಭೇಟಿಕೊಟ್ಟು ಸ್ಥಳ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲೀಂ ಓಲೈಕೆ ರಾಜಕಾರಣ ಮಾಡಿದರೆ ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ. ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಠೇವಣಿಯೂ ಸಿಗುವುದಿಲ್ಲ. ಗಲಭೆಯಲ್ಲಿ ಆಗಿರುವ ಎಲ್ಲಾ ನಷ್ಟವನ್ನು ಅಧಿಕಾರಿಗಳು ಭರಿಸಿಕೊಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.