ಪೊಲೀಸರ ಲೋಪ ಮುಚ್ಚೋದಕ್ಕೆ ಸಿಕ್ಕ ಸಿಕ್ಕವರನ್ನು ಅರೆಸ್ಟ್‌ ಮಾಡ್ತಿದ್ದಾರೆ: ಎಚ್‌ಡಿಕೆ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ ಕೈ  ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಗಣೇಶ ಕೂರಿಸಿದವರನ್ನೇ ಎಫ್‌ಐಆರ್‌ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರಾ. ಪೊಲೀಸರ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಶಾಂತಿಯ ತೋಟ. ಇದನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಮಾಯಕರನ್ನು ಬಂಧಿಸಿರೋದು ತಪ್ಪು. ಆ ಅಮಾಯಕರು ಜೈಲಿನಿಂದ ಬರೋದು ಯಾವಾಗ? ಹಿಂದೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಗಲಭೆಯ ಸ್ಪಾನ್ಸರ್ ಕಾಂಗ್ರೆಸ್ ನಾಯಕರು. ಅಲ್ಲಿ ಜೈಲಿಗೆ ಹೋದವರು ಈಗ ಏನು ಮಾಡುತ್ತಾ ಇದ್ದಾರೆ. ಈ ರೀತಿ ನಾಗಮಂಗಲದಲ್ಲೂ ಆಗಬೇಕಾ ಎಂದು ಪ್ರಶ್ನಿನಿಸಿದರು.

ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು. ಅದು ಕೋಮು ಗಲಭೆ ಆಗಿರಲಿಲ್ಲ. ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!