ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಸಿನಿಮಾ ಸಣ್ಣ ಸ್ಕ್ರೀನ್‌ಗೆ ಎಂಟ್ರಿ ಕೊಟ್ಟಿದೆ.
‘ಮಾರ್ಕ್’ ಸಿನಿಮಾ ಜಿಯೋ ಹಾರ್ಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಒಟಿಟಿ ಬಿಡುಗಡೆಯ ಜಾಹೀರಾತುಗಳು ಈಗಾಗಲೇ ಪ್ರಸಾರವಾಗುತ್ತಿದ್ದು, ಜಿಯೋ ಹಾಟ್ಸ್ಟಾರ್ನಲ್ಲಿ ಜನವರಿ 23 ರಂದು ‘ಮಾರ್ಕ್’ ಸಿನಿಮಾ ಸ್ಟ್ರೀಮಿಂಗ್ ಆರಂಭ ಮಾಡಲಿದೆ.
‘ಮಾರ್ಕ್’ ಸಿನಿಮಾವು 2025 ರಲ್ಲಿ ಬಿಡುಗಡೆ ಆದ ಸುದೀಪ್ ನಟನೆಯ ಏಕೈಕ ಸಿನಿಮಾ ಆಗಿದ್ದು, ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ಪೈರಸಿ ಮಾಡುವ ಬೆದರಿಕೆ ಹಾಕಲಾಗಿತ್ತು, ಅಲ್ಲದೆ ಸಿನಿಮಾದ ಬಗ್ಗೆ ನೆಗಟಿವ್ ಪ್ರಚಾರ ಇನ್ನಿತರೆಗಳನ್ನು ಸಹ ಮಾಡಲಾಗಿತ್ತು, ಅದೆಲ್ಲವನ್ನೂ ಮೀರಿ ‘ಮಾರ್ಕ್’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುವಲ್ಲಿ ಯಶಸ್ವಿ ಆಗಿದೆ.


