ಸಿಎಂ ಆಗಿ ಆಯ್ಕೆಯಾದ ಆತಿಶಿ ಮೊದಲು ಧನ್ಯವಾದ ಹೇಳಿದ್ದು ಇವರಿಗೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆಯೇ ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿ ಮತ್ತು ನೂತನ ಸಿಎಂ ಆಗಿ ಆಯ್ಕೆಯಾದ ಅತಿಶಿ ಮೊದಲ ಬಾರಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ತಮ್ಮನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ ಅರವಿಂದ್ ಕೇಜ್ರಿವಾಲ್ ಗೆ ಧನ್ಯವಾದ ಹೇಳಿದರು. ‘ಮೊದಲು ನಾನು ದೆಹಲಿಯ ಜನಪ್ರಿಯ ಸಿಎಂ, ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ನನ್ನ ಗುರು ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.

ಅವರು ನನ್ನ ಮೇಲೆ ನಂಬಿಕೆ ಇರಿಸಿ ಅಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಇದು ಕೇವಲ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಾನು ಸಾಮಾನ್ಯ ಕುಟುಂಬದಿಂದ ಬಂದ ಹೆಣ್ಣಮಗಳಾಗಿದ್ದು, ನನಗೆ ಟಿಕೆಟ್ ನೀಡುವುದೂ ಕೂಡ ಕಷ್ಟಸಾಧ್ಯವಿತ್ತು ಎಂದಿದ್ದಾರೆ.

ಆದರೆ ಅರವಿಂದ್ ಕೇಜ್ರಿವಾಲ್ ಅವರು ನನ್ನನ್ನು ನಂಬಿ, ಶಾಸಕಿ, ಸಚಿವೆಯಾಗಿ ಮಾಡಿ ಈಗ ನನಗೆ ಸಿಎಂ ಜವಾಬ್ದಾರಿಯನ್ನು ನೀಡಿದ್ದಾರೆ. ನನ್ನ ಮೇಲೆ ಅರವಿಂದ್ ಕೇಜ್ರಿವಾಲ್ ಅಂತಹ ನಂಬಿಕೆ ಇಟ್ಟಿದ್ದಕ್ಕೆ ನನಗೆ ಸಂತಸವಾಗಿದೆ. ದೆಹಲಿ ಸಿಎಂ ಮತ್ತು ನನ್ನ ಅಣ್ಣ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡುತ್ತಿದ್ದಾರೆ. ದೆಹಲಿಯ ಏಕೈಕ ಮುಖ್ಯಮಂತ್ರಿ ಎಂದರೆ ಅದು ಅರವಿಂದ್ ಕೇಜ್ರಿವಾಲ್ ಮಾತ್ರ ಎಂದು ನಾನು ಇಂದು ಎಲ್ಲಾ ಎಎಪಿ ಶಾಸಕರು ಮತ್ತು ದೆಹಲಿಯ 2 ಕೋಟಿ ಜನರ ಪರವಾಗಿ ನಾನು ಹೇಳಲು ಬಯಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!