ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 20 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅವರು ಜಗಧ್ರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಗುರುವಾರ ತಿಳಿಸಿದ್ದಾರೆ.
ಕೇಜ್ರಿವಾಲ್ ಅವರು ಹರಿಯಾಣದ 11 ಜಿಲ್ಲೆಗಳ 13 ಕಡೆ ನಡೆಯುವ ಸಮಾವೇಶಗಳಲ್ಲೂ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪಾಠಕ್ ಹೇಳಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 8ರಂದು ಫಲಿತಾಂಶ ಪ್ರಕಟವಾಗಲಿದೆ.