ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಇಬ್ಬರು ಮೃತ್ಯು, ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಸೇಟ್ ದಿನ್ನೆ ಬಳಿ ಈ ಅಪಘಾತ ಸಂಭವಿಸಿದ್ದು, ಟಾಟಾ ಸುಮೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!